ಬಾಳೆಲೆ/ಕೊಡಗು: ನಾಗರಹೊಳೆ ಅರಣ್ಯದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ವನ್ಯಜೀವಿ ಅರಣ್ಯ ವಿಭಾಗದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಗೋಣಿಕೊಪ್ಪ ಸಮೀಪದ ಬಾಳಲೆ ಗ್ರಾಮದ ಶಶಿ ಬಂಧಿತ ಆರೋಪಿ. ಶನಿವಾರಸಂತೆಯ ಲಾಡ್ಜ್‌ನಲ್ಲಿ ಆರೋಪಿಗಳು ತಂಗಿದ್ದ ವಿಷಯ ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನು ಪೊಲೀಸ್ ಕಾರ್ಯಾಚರಣೆ ವೇಳೆ ಮತ್ತೊಬ್ಬ ಆರೋಪಿ ಲಾಡ್ಜ್‌ನಿಂದ ಜಿಗಿದು ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಮತ್ತೋರ್ವನಿಗಾಗಿ ಸಿಬ್ಬಂದಿ ತೀವ್ರ ಹುಡುಕಾಟ ಪ್ರಾರಂಭಿಸಿದ್ದಾರೆ.