ಪೊನ್ನಂಪೇಟೆ (ಕೊಡಗು): ಹೊಸ ತಾಲೂಕು ರಚನೆಗೆ ಹೋರಾಡಿದ ಪ್ರಮುಖರ ಹೆಸರನ್ನೇ ಹಾಕದೆ, ಮಗುವಿಲ್ಲದೆ ನಾಮಕರಣ ಮಾಡಲು ಜಿಲ್ಲಾಡಳಿತ ಮುಂದಾಗಿದೆ ಎಂದು ಆರೋಪಿಸಿ ಕೋದೆಯಂಡ ವಿಠ್ಠಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ತಾಲೂಕು ರಚನೆ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಹೋರಾಟ ಸಮಿತಿ ಪ್ರಮುಖ ಮಾಚಿಮಾಡ ರವೀಂದ್ರ ಸೇರಿ ಪೊನ್ನಂಪೇಟೆ ಹಿರಿಯ ನಾಗರಿಕ ಹೋರಾಟ ಸಮಿತಿ ಪ್ರಮುಖರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಹೋರಾಟಗಾರರನ್ನು ಕಡೆಗಣನೆ ಮಾಡಲಾಗಿದೆ ಎಂದು ತಾಲೂಕು ರಚನಾ ಹೋರಾಟ ಸಮಿತಿಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತ್ಯೇಕ ರಸ್ತೆ ಅಪಘಾತ: 8 ಮಂದಿ ದುರ್ಮರಣ
ಮಾಜಿ ಸಿಎಂ ಕುಮಾರಸ್ವಾಮಿ, ತಾಲೂಕು ರಚನಾ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಹೋರಾಟ ಸಮಿತಿ ಪ್ರಮುಖ ಮಾಚಿಮಾಡ ರವೀಂದ್ರ ಸೇರಿ ಪೊನ್ನಂಪೇಟೆ ಹಿರಿಯ ನಾಗರಿಕ ಹೋರಾಟ ಸಮಿತಿ ಪ್ರಮುಖರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.