ಕೊಡಗು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವೃದ್ಧರೋರ್ವರು ಮೃತಪಟ್ಟಿದ್ದು, ಇದುವರೆಗೆ ಒಟ್ಟು ಸೋಂಕಿಗೆ 27 ಜನರು ಸಾವನ್ಬಪ್ಪಿದ್ದಾರೆ.
ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮದ 61 ವರ್ಷದ ವೃದ್ಧ ಮೃತಪಟ್ಟಿದ್ದು, ಇವರು ಅಧಿಕ ರಕ್ತದೊತ್ತಡ, ಸಕ್ಕರೆ ಖಾಯಿಲೆ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.
ಎರಡು ದಿನಗಳ ಹಿಂದಷ್ಟೇ ವ್ಯಕ್ತಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ತಕ್ಷಣವೇ ಮೂರ್ನಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಬಳಿಕ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕರೆತರಲಾಗಿತ್ತು. ಈ ವೇಳೆ ಪರಿಶೀಲಿಸಿದಾಗ ವೃದ್ಧ ಮೃತಪಟ್ಟಿದ್ದರು.