ಕೊಡಗು: ಕೊರೊನಾ ಸೋಂಕಿನಿಂದಾಗಿ ಜಿಲ್ಲೆಯಲ್ಲಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಶ್ರೀಮಂಗಲದ 65 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಇವರು ರಕ್ತದೊತ್ತಡ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಆಗಸ್ಟ್. 5 ರಂದು ಜ್ವರ ಕಾಣಿಸಿಕೊಂಡಿದ್ದರಿಂದ ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿವೆ.