ಕೊಡಗು: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕುಶಾಲನಗರದ ಬೈಚನಹಳ್ಳಿಯ 77 ವರ್ಷದ ವೃದ್ಧೆ ಕೊರೊನಾದಿಂದ ಇಂದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಆಗಸ್ಟ್ 23ರಂದು ಕೆಮ್ಮು ಕಾಣಿಸಿಕೊಂಡಿತ್ತು. ಇಂದು ವೃದ್ಧೆಯ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಳಿಕ ವೃದ್ಧೆಯ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮೃತ ವೃದ್ಧೆಯ ಅಂತ್ಯ ಸಂಸ್ಕಾರವನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.