ಮಡಿಕೇರಿ(ಕೊಡಗು): ಕನ್ನಡ ನಾಡಿನ ಜೀವನದಿ, ಕೊಡಗಿನ ಕುಲ ದೇವತೆ, ಕಾವೇರಿ ತವರು ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 17 ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ತಲಕಾವೇರಿಯ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.
ವರ್ಷಕ್ಕೊಮ್ಮೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡುವ ಕ್ಷಣವನ್ನ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಭಕ್ತರು ತುದಿಗಾಲಿನಲ್ಲಿ ನಿಲ್ಲುತ್ತಾರೆ. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ತಲಕಾವೇರಿ ಕ್ಷೇತ್ರದಲ್ಲಿ ನಿನ್ನೆಯಿಂದ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಈ ವಿಸ್ಮಯವನ್ನ ಕಣ್ತುಂಬಿಕೊಳ್ಳಲು ಭಕ್ತಗಣ ಕಾತುರರಾಗಿದ್ದಾರೆ.
ಅ.17ಕ್ಕೆ ನಾಡಿನ ಜೀವನದಿ ತಲಕಾವೇರಿಯಲ್ಲಿ ತೀರ್ಥೋದ್ಭವ - ಕೊಡಗು ಜಿಲ್ಲೆ
ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದ್ದು, ಅಕ್ಟೋಬರ್ 17 ರಂದು ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡುತ್ತಿದ್ದಾಳೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.