ವಿರಾಜಪೇಟೆ: ಕೆದಮುಳ್ಳೂರು ಗ್ರಾಮದಲ್ಲಿ ಕಾಡು ಕುರಿಯನ್ನು ಬೇಟೆಯಾಡಿದ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ವಿಶ್ವನಾಥ ಎಂಬಾತನೇ ಬಂಧಿತ ಆರೋಪಿ. ಈತನ ಬಗ್ಗೆ ಖಚಿತ ಸುಳಿವಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಅಂದಾಜು ಮೂರು ಕೆ.ಜಿ.ಗೂ ಅಧಿಕ ಕಾಡು ಕುರಿಯ ಮಾಂಸ ಲಭಿಸಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.