ETV Bharat / state

ಕೊಡಗಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್​​ ದೃಢ..! - ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ

ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.

one Corona Positive Case Detection in kodagu
ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್
author img

By

Published : May 24, 2020, 11:44 AM IST

ಕೊಡಗು: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮುಂಬೈನಿಂದ ಬಂದಿದ್ದ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊಡಗಿನ ಕುಶಾಲನಗರ ಸಮೀಪದ ಗ್ರಾಮದ 25 ವರ್ಷದ ಯುವಕ‌ ಮುಂಬೈನಿಂದ ಬುಧವಾರ ಕೊಡಗಿಗೆ ಬಂದಿದ್ದ. ಮಂಗಳೂರಿಗೆ ಆಗಮಿಸಿ ನಂತರ ಮಂಗಳೂರು ಹಾಗೂ ಕೊಡಗು ಜಿಲ್ಲೆಗಳ ಗಡಿಗೆ ಹೊಂದಿಕೊಂಡಿರುವ ಸಂಪಾಜೆ ಚೆಕ್‌ಪೋಸ್ಟ್ ಮೂಲಕ ಕೊಡಗಿಗೆ ಬರುತ್ತಿದ್ದ ಎನ್ನಲಾಗಿದೆ.

ಆತನನ್ನು ನೇರವಾಗಿ ಮಡಿಕೇರಿಯ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಗಂಟಲು ದ್ರವವನ್ನು ಪರೀಕ್ಷೆ ಕಳುಹಿಸಿದ್ದರು.‌ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ, ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಮುಂಬೈನಿಂದ ಬಂದ ಇಬ್ಬರಲ್ಲಿ ಕೊರೊನಾ ಕಂಡು ಬಂದಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.

For All Latest Updates

TAGGED:

Coronavirus
ETV Bharat Logo

Copyright © 2025 Ushodaya Enterprises Pvt. Ltd., All Rights Reserved.