ಕೊಡಗು: ಜಿಲ್ಲೆಯಲ್ಲಿ ಮತ್ತೊಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 96 ಕ್ಕೆ ಏರಿಕೆಯಾಗಿದೆ.
ಈ ಹಿಂದೆ ಮಡಿಕೇರಿ ತಾಲೂಕಿನ ಮೂರ್ನಾಡುವಿನಲ್ಲಿ ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಯ ಸಂಪರ್ಕದಿಂದಾಗಿ 45 ವರ್ಷದ ಪುರುಷ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಮೂರ್ನಾಡುವಿನ ಆರೋಗ್ಯ ಇಲಾಖೆಯ ವಸತಿ ಗೃಹಕ್ಕೆ ಸ್ಯಾನಿಟೈಸರ್ ಸಿಂಪಡಿಸಲಾಗಿದ್ದು, ನಿಯಂತ್ರಿತ ಪ್ರದೇಶವೆಂದು ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 96 ಕ್ಕೆ ಏರಿಕೆಯಾಗಿದ್ದು, 16 ಜನ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, 79 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 38 ಕ್ಕೆ ಏರಿಕೆಯಾಗಿದೆ.