ETV Bharat / state

ಕಾಡಾನೆ ದಾಳಿಯಲ್ಲಿ ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಶನಿವಾರಸಂತೆ ಬಳಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ಮಾಡಿದ್ದು, ಓರ್ವ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.

one died in wild elephant attack
ಕಾಡಾನೆ ದಾಳಿಯಲ್ಲಿ ಓರ್ವ ಸಾವು
author img

By

Published : Apr 11, 2020, 8:55 PM IST

Updated : Apr 11, 2020, 10:04 PM IST

ಕೊಡಗು/ಶನಿವಾರಸಂತೆ: ಉತ್ತರ ಕೊಡಗಿನ ಆನೆಕಾಡು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಕಬ್ಬಿನಗದ್ದೆ ಬಳಿಯ ಅರಣ್ಯದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಬ್ಬಿನಗದ್ದೆ ಹಾಡಿ ನಿವಾಸಿ ಚನ್ನಪ್ಪ ಎಂಬುವವರ ಎಂ.ಸಿ.ಲೋಕೇಶ್ (37) ಮೃತಪಟ್ಟ ದುರ್ದೈವಿಯಾಗಿದ್ದು, ಅದೇ ಗ್ರಾಮದ ಮುತ್ತ (65) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮುತ್ತ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮಕ್ಕೆ ಹೊಂದಿಕೊಂಡಿರುವ ಕಾಡಿಗೆ ಮೇಯಲು ಹೋಗಿದ್ದ ದನಗಳನ್ನು ಕರೆತರಲು ಹೋದ ಸಂದರ್ಭ ಈ ಇಬ್ಬರ ಮೇಲೆ‌ ಕಾಡಾನೆ‌‌ ಏಕಾಏಕಿ ದಾಳಿ‌ ಮಾಡಿದೆ. ದಾಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಿದ್ದ ವೇಳೆ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

Last Updated : Apr 11, 2020, 10:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.