ಕೊಡಗು: ಜಿಲ್ಲೆಯಲ್ಲಿ ಹೊಸದಾಗಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದ 35 ವರ್ಷದ ನಿವಾಸಿಗೆ ಸೋಂಕು ದೃಢಪಟ್ಟಿದೆ.
ಈತ ಸೌದಿ ಅರೇಬಿಯಾದಿಂದ ಹಿಂದಿರುಗಿದವನಾಗಿದ್ದು, ಬಂದ ತಕ್ಷಣ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಈ ಹಿಂದೆ ಸೋಂಕು ದೃಢಪಟ್ಟಿದ್ದ 32 ವರ್ಷದ ವ್ಯಕ್ತಿಯೊಬ್ಬ ಗೋಣಿಕೊಪ್ಪದ ಕೆ.ಇ.ಬಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತಂಗಿದ್ದ ಕಾರಣ ಈ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿತ್ತು. ಇದೀಗ ನಿಯಂತ್ರಿತ ಈ ಪ್ರದೇಶವನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 47 ಕ್ಕೇರಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 44 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 22 ಪ್ರದೇಶಗಳನ್ನು ಲಾಕ್ಡೌನ್ ಮಾಡಲಾಗಿದೆ.