ಕೊಡಗು: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಮಡಿಕೇರಿಯ 38 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಡಿಕೇರಿ ನಗರದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರು. ಆ ಬಳಿಕ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದ ಅವರು, ತೀವ್ರ ಜ್ವರದ ಹಿನ್ನೆಲೆಯಲ್ಲಿ ಜುಲೈ 26ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.