ಕೊಡಗು: ಜಿಲ್ಲೆಯಲ್ಲಿ 5 ದಿನಗಳು ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ.
ಜಿಲ್ಲೆಯಲ್ಲಿ 2 ದಿನದಲ್ಲಿ ಕುಂಭದ್ರೋಣ ಮಳೆ ಸುರಿಯಲಿದೆ. ಜುಲೈ 18 ರಿಂದ 22 ರವರೆಗೆ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆ ಬೀಳುವ ಸಾಧ್ಯತೆಗಳಿದೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ತುರ್ತು ಪರಿಸ್ಥಿತಿಯಲ್ಲಿ ದೂರವಾಣಿ ಸಂಖ್ಯೆ 08272-221077 ಅಥಾವಾ ವಾಟ್ಸ್ ಆ್ಯಪ್ ನಂಬರ್ 8550001077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮನವಿ ಮಾಡಿದ್ದಾರೆ.