ವಿರಾಜಪೇಟೆ (ಕೊಡಗು) : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಇದ್ದರೂ ವಿರಾಜಪೇಟೆ ಪಟ್ಟಣದಲ್ಲಿ ಅದನ್ನು ಪಾಲಿಸದವರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಮಾಸ್ಕ್ ಧರಿಸದೇ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಮಾಲೀಕರು, ದಾರಿಯಲ್ಲಿ ಓಡಾಡುತ್ತಿದ್ದವರಿಗೆ ತಲಾ 100 ರೂ. ದಂಡ ಹಾಕಿ ಪಟ್ಟಣ ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶ್ರೀಧರ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸಿರುವ ಮೊದಲ ದಂಡ ಇದಾಗಿದ್ದು, ಮಾಸ್ಕ್ ಧರಿಸವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದ್ದರು. ಹೀಗಿದ್ದರೂ ನಿಯಮಗಳನ್ನು ಗಾಳಿಗೆ ತೂರಿದವರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.