ಕೊಡಗು: ಮಡಿಕೇರಿಯಲ್ಲಿ ಪೆಟ್ರೋಲ್ ಬಾಂಬ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಆರೋಪಿಗಳಿಗೆ ಮಡಿಕೇರಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದ್ದು, ನ್ಯಾಯಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಆಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶನಿವಾರ ಆರೋಪಿಗಳಾದ ಮುಸ್ತಫಾ, ಅಬ್ದುಲ್ಲಾ ಅವರನ್ನು ಬಂಧಿಸಲಾತ್ತು.
ಅಲ್ಲದೆ ಆಡಿಯೋ ಲೀಕ್ ಆಗುತ್ತಿದ್ದಂತೆ ಎನ್ಐಇ ಕಾರ್ಯಪ್ರವೃತ್ತರಾಗಿದ್ದು, ಆರೋಪಿಗಳಿಂದ ಮಾಹಿತಿ ಪಡೆಯಲು ಸಿದ್ಧರಾಗಿದ್ದಾರೆ. ಇಂದು ಜಿಲ್ಲೆಗೆ ಎನ್ಐಎ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೆಟ್ರೋಲ್ ಬಾಂಬ್ ಆಡಿಯೋ ಹೊರಬರುತ್ತಿದ್ದಂತೆ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದ್ದು, ಕಾವೇರಿ ತೀರ್ಥೋದ್ಭವದ ಹಿನ್ನೆಲೆ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ತೀರ್ಥೋದ್ಭವಕ್ಕೆ ಸಾವಿರಾರು ಭಕ್ತರು ಬರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ತಪಾಸಣೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ಮಡಿಕೇರಿಯಲ್ಲಿ 50 ಕಡೆ ಪೆಟ್ರೋಲ್ ಬಾಂಬ್ ಹಾಕುವ ಸಂಭಾಷಣೆ ವೈರಲ್: ನಗರಸಭಾ ಸದಸ್ಯ ಸೇರಿ ಇಬ್ಬರ ಬಂಧನ