ಕೊಡಗು: ಮೂವರನ್ನು ಬಲಿಪಡೆದ ಹುಲಿ ಕೊಲ್ಲುವಂತೆ ಆಗ್ರಹಿಸಿ ರೈತ ಸಂಘಟನೆ ಕರೆ ನೀಡಿರುವ ಪೊನ್ನಂಪೇಟೆ ತಾಲೂಕು ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ಭಾಗದಲ್ಲಿ ನಿರಂತರ ಹುಲಿ ದಾಳಿಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹುಲಿ ಕೊಲ್ಲುವಂತೆ ಆಗ್ರಹಿಸಿ ರೈತ ಸಂಘ ಕರೆ ನೀಡಿದ್ದ ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟು ಮುಚ್ಚಲಾಗಿದ್ದು, ಖಾಸಗಿ ವಾಹನಗಳು ರಸ್ತೆಗಿಳಿದಿಲ್ಲ.
15 ದಿನಗಳಿಂದ ಹುಲಿ ಸೆರೆಗೆ 150ಕ್ಕೂ ಅಧಿಕ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿದ್ದು, 4 ಕಾಡಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ.