ಕೊಡಗು: ಕರುನಾಡ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥೋದ್ಭವ ಜರುಗಲಿದೆ.
ತೀರ್ಥೋದ್ಭವ ಹಿನ್ನೆಲೆಯಲ್ಲಿ ತಲಕಾವೇರಿಯಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ವರ್ಷಕ್ಕೊಮ್ಮೆ ಘಟಿಸುವ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಹೀಗಾಗಿ, ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲದಲ್ಲಿ ಸಕಲ ರೀತಿಯ ಏರ್ಪಾಡುಗಳನ್ನು ಮಾಡಲಾಗಿದೆ.
ಇದನ್ನೂ ಓದಿ: ರಾಜಿ ಸಂಧಾನದ ಮೂಲಕ ಇತ್ಯರ್ಥವಾದ ಪ್ರಕರಣಗಳ ಮರುವಿಚಾರಣೆ ಸಾಧ್ಯವಿಲ್ಲ: ಹೈಕೋರ್ಟ್
ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ, ಸಿಸಿ ಕ್ಯಾಮರಾಗಳನ್ನು ಅವಶ್ಯವಿರುವ ಕಡೆಗಳಲ್ಲಿ ಅಳವಡಿಸಲಾಗಿದೆ. ತೀರ್ಥೋದ್ಭವವಾಗುವ ಸುತ್ತ ಮತ್ತು ಕೊಳದ ಸುತ್ತಮುತ್ತಲಿನ ಪ್ರದೇಶವನ್ನು ಬಣ್ಣದ ಹೂಗಳಿಂದ ಆಕರ್ಷಕವಾಗಿ ಶೃಂಗರಿಸಲಾಗಿದೆ. ತೀರ್ಥೋದ್ಭವ ಕಾರಣ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಅರ್ಚಕರ ತಂಡವೂ ಕಾವೇರಿಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ.