ಕೊಡಗು: 2018 ರ ಮಹಾಮಳೆಯಿಂದ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗಾಗಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಂದ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ತಲಾ 9.85 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 463 ಮನೆಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಎಲ್ಲ ಕಾಮಗಾರಿ ಮುಕ್ತವಾಗಿದ್ದು, ಸದ್ಯದಲ್ಲೇ ಸಂತ್ರಸ್ತರಿಗೆ ನಿವೇಶನಗಳನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೇ ಮಡಿಕೇರಿ ತಾಲೂಕಿನ ಮದೆನಾಡಿನಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಸಹ ಹಸ್ತಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ.