ಕೊಡಗು: ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಲಕಾವೇರಿಗೆ ಆಗಮಿಸಲಿದ್ದಾರೆ.
ಮಡಿಕೇರಿ ತಾಲೂಕಿನ ಭಾಗಮಂಡಲ ಕಾವೇರಿ ಕಾಲೇಜಿನ ಹೆಲಿಪ್ಯಾಡ್ಗೆ ಬಂದಿಳಿಯಲಿರುವ ರಾಷ್ಟ್ರಪತಿಗಳು, ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಪೂಜೆ ಸಲ್ಲಿಸಲಿದ್ದಾರೆ.
ನಂತರ 12 ಗಂಟೆಗೆ ಮಡಿಕೇರಿ ಎಫ್ಎಂಸಿ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಆಗಮಿಸಲಿದ್ದು, ಮಧ್ಯಾಹ್ನ ಖಾಸಗಿ ಹೋಟೆಲ್ನಲ್ಲಿ ಊಟ ಸವಿದ ಬಳಿಕ, ಮಧ್ಯಾಹ್ನ 3 ಗಂಟೆಗೆ ಸನ್ನಿಸೈಡ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ: ಕೂಲಿಗೆ ಕರೆಯಲಿಲ್ಲ ಎಂದು ಶುರುವಾದ ಜಗಳ ಮಹಿಳೆಯ ಕೊಲೆಯಲ್ಲಿ ಅಂತ್ಯ!
ಜನರಲ್ ತಿಮ್ಮಯ್ಯ ನಿವಾಸ ಸನ್ನಿಸೈಡ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಮಿಸಿರುವ ವಾರ್ ಮ್ಯೂಸಿಯಂ ಉದ್ಘಾಟನೆ ಮಾಡಲಿದ್ದಾರೆ. ನಂತರ ಮ್ಯೂಸಿಯಂನಲ್ಲಿರುವ ಯುದ್ಧ ಟ್ಯಾಂಕರ್, ಯುದ್ಧ ವಿಮಾನ, ಮ್ಯೂಸಿಯಂ ವೀಕ್ಷಣೆ ಮಾಡಲಿದ್ದಾರೆ.
ಬಳಿಕ ಸನ್ನಿಸೈಡ್ನಿಂದ ಎಫ್ಎಂಸಿ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಆಗಮಿಸಲಿದ್ದು, ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ದೆಹಲಿಗೆ ಹಿಂತಿರುಗಲಿದ್ದಾರೆ.