ETV Bharat / state

ಕೊಡಗಿನ ಅರಣ್ಯ ವಾಸಿಗಳಿಗೆ ರಕ್ಷಣೆ ಒದಗಿಸಿ: ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ - Home Minister Araga Jnanendra notice the Kodagu SP

ಯಾರ ರಕ್ಷಣೆಯೂ ಇರದ, ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿ ಬದುಕನ್ನು ಕಟ್ಟಿಕೊಂಡಿರುವ ಅರಣ್ಯ ವಾಸಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

provide protection to Kodagu forest dwellers says Araga Jnanendra
ಗೃಹ ಸಚಿವರನ್ನು ಭೇಟಿ ಮಾಡಿದ ಜೇನು ಕುರುಬ ಸಮುದಾಯದ ಸದಸ್ಯರು
author img

By

Published : Feb 4, 2022, 8:44 AM IST

ಬೆಂಗಳೂರು: ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ವಾಸಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ, ಅರಣ್ಯಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಜೇನು ಕುರುಬ ಸಮುದಾಯದ ಸುಶೀಲಾ ಮತ್ತು ಶಿವು ಸಚಿವರ ಗಮನ ಸೆಳೆದಿದ್ದಾರೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಚಿವರು, ಯಾರ ರಕ್ಷಣೆಯೂ ಇರದ, ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿ ಬದುಕನ್ನು ಕಟ್ಟಿಕೊಂಡಿರುವ ಅರಣ್ಯ ವಾಸಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗೃಹ ಸಚಿವರು ಸೂಚನೆ ನೀಡಿದರು.

ಜತೆಗೆ ನಾಗರ ಹೊಳೆ ಪ್ರದೇಶಕ್ಕೆ ಭೇಟಿ ನೀಡಿ, ಅರಣ್ಯ ವಾಸಿಗಳನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಸ್ವತಃ ಸ್ವೀಕರಿಸುತ್ತೇನೆ ಎಂದು ಭರವಸೆ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಶಾಂತ ರಾಮ್ ಸಿದ್ಧಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲೇ ಮೊದಲ ಬಾರಿಗೆ 'ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿ': ಕೇವಲ 30 ನಿಮಿಷದಲ್ಲಿ ಚಿಕಿತ್ಸೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.