ಕೊಡಗು/ವಿಜಯನಗರ: ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಸಂಧ್ಯಾ (18) ಎಂದು ಗುರುತಿಸಲಾಗಿದೆ.
ಹೆರೂರು ನಿವಾಸಿ ನಿವೃತ್ತ ಯೋಧ ಸುಭಾಷ್ ಪುತ್ರಿಯಾದ ಸಂಧ್ಯಾ, ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ನಿನ್ನೆ (ಶನಿವಾರ) ಫಲಿತಾಂಶ ನೋಡಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗ್ತಿದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯನಗರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ನೊಂದು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಶಾಮರಾಜ್(18) ಮೃತ ವಿದ್ಯಾರ್ಥಿ.
ಬಳ್ಳಾರಿ ಜಿಲ್ಲೆಯ ಸಂಡೂರಿನ ಶ್ರೀಶೈಲ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಶಾಮರಾಜ್ ಓದುತ್ತಿದ್ದ. ಬೆಳಗ್ಗೆ ಕುಟುಂಬ ಸದಸ್ಯರೊಡನೆ ಹೊಲಕ್ಕೆ ಬಿತ್ತನೆ ಕೆಲಸಕ್ಕೆ ಹೋಗಿದ್ದಾನೆ. ಮಧ್ಯಾಹ್ನ ಆನ್‌ಲೈನ್‌ನಲ್ಲಿ ಫಲಿತಾಂಶ ನೋಡಿದ್ದಾನೆ. ಗಣಿತ ವಿಷಯದಲ್ಲಿ ಫೇಲಾಗಿದ್ದುದನ್ನು ತಿಳಿದು, ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿಯಲ್ಲಿ ಫೇಲ್: ಗದಗದಲ್ಲಿ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ