ಕೊಡಗು: ಜಿಲ್ಲೆಯ ಹಿತದೃಷ್ಟಿಯಿಂದ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಿ ಎಂದು ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ದಿನಗಳು ಕಳೆದಂತೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಿಸುತ್ತಿವೆ. ಈ ಹಿನ್ನೆಲೆ ಜಿಲ್ಲೆಯ ಪ್ರತೀ ಗಡಿಗಳಲ್ಲಿ ಚೆಕ್ ಪೋಸ್ಟ್ ತೆರೆಯಬೇಕು. ಈಗಾಗಲೇ ನೆರೆಯ ಕೇರಳಕ್ಕೆ ಸಂಪರ್ಕಿಸುವ ಜಿಲ್ಲೆಯ ಗಡಿಯನ್ನು ಬಂದ್ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲೂ ಜಿಲ್ಲಾಡಳಿತ ಕಠಿಣವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.
ಆದ್ದರಿಂದ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಬರುವವರನ್ನು ಕ್ವಾರಂಟೈನ್ ಮಾಡಬೇಕು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ನೂರಾಗುತ್ತೆ ಅಂತ ವಾರದ ಹಿಂದೆ ಹೇಳಿದ್ದೆ. ಅದರಂತೆ ಈಗ ಜಿಲ್ಲೆಯಲ್ಲಿ ನೂರನ್ನೂ ದಾಟಿದ್ದು, ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸುವಂತೆ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ.