ಕೊಡಗು: ಜಿಲ್ಲೆ ಸೇರಿದಂತೆ ಮಲೆನಾಡು ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ 4 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 19 ರಿಂದ 22ರ ವರೆಗೆ ಜಿಲ್ಲೆ ಮತ್ತು ಮಲೆನಾಡು ಭಾಗದಲ್ಲಿ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19 ರಿಂದ 21ರ ಬೆಳಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಹಾಗೂ 22ರ ಬೆಳಗ್ಗೆ ವರೆಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಆದೇಶ ನೀಡಿದೆ.
ಅಲ್ಲದೆ ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.