ಕೊಡಗು: ಕಳೆದ ಕೆಲ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಹೀಗಾಗಿ ಹಾರಂಗಿ ಜಲಾಶಯ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು ನಾಲ್ಕು ಗೇಟ್ಗಳ ಮೂಲಕ ನದಿಗೆ 6,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.
ಅಂದಾಜು 20 ಸಾವಿರ ಕ್ಯೂಸೆಕ್ಸ್ ಪ್ರಮಾಣದ ನೀರು ಹೊರಗಡೆಯಿಂದ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಅಣೆಕಟ್ಟು ಕೆಳಭಾಗದ ನಿವಾಸಿಗಳು,ಜಾನುವಾರುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಣೆಕಟ್ಟು ಅಧಿಕಾರಿಗಳ ಸೂಚನೆ ನೀಡಲಾಗಿದೆ. ಕೊರೊನಾ ವೈರಸ್ ಮಧ್ಯೆ ಮುಂಗಾರ ಅಬ್ಬರ ಜೋರಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಸಲ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹಾರಂಗಿ ಜಲಾಶಯದಲ್ಲಿ ಸದ್ಯದ ನೀರಿನ ಮಟ್ಟ 2898 ಅಡಿ ಆಗಿದೆ. ಇದರ ಗರಿಷ್ಠ ಸಾಮರ್ಥ್ಯ 2922 ಅಡಿಯಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬಹುತೇಕ ಎಲ್ಲ ಜಲಾಶಯಗಳು ತುಂಬಿದ್ದು, ಕೆಆರ್ಎಸ್, ಹೇಮಾವತಿ, ಕಬಿನಿ, ಲಿಂಗನಮಕ್ಕಿ, ಮಲಪ್ರಭಾ ಜಲಾಶಯ ತುಂಬಿವೆ.
-
ಮಳೆ ಮುನ್ಸೂಚನೆ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/WD0FrEuJrV
— KSNDMC (@KarnatakaSNDMC) July 14, 2021 " class="align-text-top noRightClick twitterSection" data="
">ಮಳೆ ಮುನ್ಸೂಚನೆ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/WD0FrEuJrV
— KSNDMC (@KarnatakaSNDMC) July 14, 2021ಮಳೆ ಮುನ್ಸೂಚನೆ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/WD0FrEuJrV
— KSNDMC (@KarnatakaSNDMC) July 14, 2021
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.