ಮಡಿಕೇರಿ(ಕೊಡಗು): ಒಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆ ಶನಿವಾರದಿಂದ ತನ್ನ ಆರ್ಭಟ ನಿಲ್ಲಿಸಿದ್ದು ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಜಿಲ್ಲೆಯಲ್ಲಿ ಮೋಡ ಕವಿದ ಹಾಗೂ ತುಂತುರು ಮಳೆ ಆಗುತ್ತಿದೆ. ಬ್ರಹ್ಮಗಿರಿ, ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಗುಡ್ಡ ಕುಸಿತದಿಂದ ಕಣ್ಮರೆಯಾಗಿರುವ ಉಳಿದ ನಾಲ್ವರಿಗೆ ಎನ್ಡಿಆರ್ಎಫ್ನಿಂದ ಕಾರ್ಯಾಚರಣೆ ಮುಂದುವರಿದಿದೆ.
ತಗ್ಗು ಪ್ರದೇಶಗಳಲ್ಲಿನ ನೀರು ಕಡಿಮೆ ಆಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಖುದ್ಧು ಪರಿಸ್ಥಿತಿಯನ್ನು ಅವಲೋಕಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕಣ್ಮರೆ ಆಗಿರುವವರ ಹುಡುಕಲೇಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಮತ್ತೊಂದೆಡೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ರಾತ್ರಿಯೇ ಜಿಲ್ಲೆಗೆ ಆಗಮಿಸಿದ್ದು, ಇಂದು ಜಲಾವೃತ ಹಾಗೂ ಗುಡ್ಡ ಕುಸಿತದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.