ಕೊಡಗು: ಜಿಲ್ಲೆಯಲ್ಲಿ ಮಳೆ ತೀವ್ರತೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ಎರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಗುಡ್ಡಗಾಡು ಪ್ರದೇಶದ ವ್ಯಾಪ್ತಿಯಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಪ್ರವಾಹಕ್ಕೆ ಸಂಬಂಧಿಸಿದಂತೆ ವಿಪತ್ತುಗಳು ಎದುರಾದರೆ ಜಿಲ್ಲಾಡಳಿತ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.