ETV Bharat / state

ಮೆಡಿಕಲ್ ಕಿಟ್‌ಗಳ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸಲಿ: ರಮಾನಾಥ ರೈ - Madikeri news

‌ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಪ್ರತಿಪಕ್ಷದವರು ಒತ್ತಾಯಿಸಿದರೂ ಸದನ ಸಮಿತಿಯಲ್ಲಿ ಸ್ಪೀಕರ್ ತನಿಖೆಗೆ ಅವಕಾಶ ಕೊಟ್ಟಿಲ್ಲ.‌ ಹೀಗಾಗಿ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ ನೀಡಿದ್ದಾರೆ.‌

Ramanatha Rai
ಮಾಜಿ ಸಚಿವ ಬಿ.ರಮಾನಾಥ ರೈ
author img

By

Published : Aug 1, 2020, 6:44 PM IST

ಮಡಿಕೇರಿ (ಕೊಡಗು): ಮೆಡಿಕಲ್ ಕಿಟ್‌ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೊರೊನಾ ಮತ್ತು ರೋಗಿಯ ಹೆಸರಲ್ಲಿ ಹಣ ಮಾಡುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಉಪಕರಣಗಳನ್ನು ಖರೀಸಿದಿಸಿದೆ. ಇದರ ಬಗ್ಗೆ ಧ್ವನಿ ಎತ್ತಿದ ಬಳಿಕ ದ್ವಂದ್ವ ಹೇಳಿಕೆಗಳನ್ನು ಕೊಡುತ್ತಿದ್ದಾರೆ.‌ ಈಗಾಗಲೇ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಇವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ. ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ!

‌ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಪ್ರತಿಪಕ್ಷದವರು ಒತ್ತಾಯಿಸಿದರೂ ಸದನ ಸಮಿತಿಯಲ್ಲಿ ಸ್ಪೀಕರ್ ತನಿಖೆಗೆ ಅವಕಾಶ ಕೊಟ್ಟಿಲ್ಲ.‌ ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳು ಕೇಳಿ ಬಂದಾಗ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಇದ್ದಾಗಲೂ 7 ಪ್ರಕರಣಗಳನ್ನು ಸಿಬಿಐ ತನಿಖೆಗೆ ಕೊಟ್ಟಿದ್ದೇವೆ. ಆಡಳಿತ ಸರ್ಕಾರದ ಮೇಲೆ ಜನತೆಗೆ ಅಪ ನಂಬಿಕೆಗಳು ಬರಬಾರದು. ಆದ್ದರಿಂದ‌ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.