ಕೊಡಗು: ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪದ ಮೇರೆಗೆ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.
ದೀಪಕ್ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎನ್ನಲಾಗಿದೆ. ಜೊತೆಗೆ ಹಲ್ಲೆ ನಡೆಸಿದ ದೀಪಕ್ ಸ್ನೇಹಿತರಾದ ಜಾಬಿರ್, ಬಶೀರ್ ಮತ್ತು ನಜೀಬ್ ನಾಲ್ವರನ್ನೂ ವಶಕ್ಕೆ ಪಡೆಯಲಾಗಿದೆ.
ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಹಿಡಿದು ಎಳೆದಾಡಿರುವ ಆರೋಪ ಕೇಳಿ ಬಂದಿದ್ದು, ಬಾಲಕಿ ಪೋಷಕರಿಂದ ಪೊಲೀಸ್ ಠಾಣೆಗೆ ದೂರು ದಾಖಲಾದ ಹಿನ್ನೆಲೆ ಆರೋಪಿ ದೀಪಕ್ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಕೆಲ ತಿಂಗಳ ಹಿಂದಷ್ಟೇ ದೀಪಕ್ ಅಪ್ರಾಪ್ತ ಬಾಲಕಿಯ ಅಪಹರಿಸಿದ್ದ ಆರೋಪ ಕೇಳಿ ಬಂದಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ದೀಪಕ್ ಮತ್ತೆ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಈ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.