ETV Bharat / state

ಕೊಡಗು: ವಿವಾಹಿತೆ ಮೇಲೆ ಅತ್ಯಾಚಾರ ಯತ್ನ.. ಓರ್ವನ ಬಂಧನ, ಎರಡು ಆಟೋ ವಶ - ಸಂತ್ರಸ್ತೆಯಿಂದ ಪೊಲೀಸ್​ ಠಾಣೆಗೆ ದೂರು

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಗ್ರಾಮವೊಂದರಲ್ಲಿ ವಿವಾಹಿತೆ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

Kodagu District
ಕೊಡಗು ಜಿಲ್ಲೆ
author img

By

Published : Mar 22, 2023, 5:48 PM IST

ಕೊಡಗು: ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳನ್ನು ಆಟೋದಲ್ಲಿ ಎಳೆದೊಯ್ದು, ಪಕ್ಕದ ಕಾಫಿ ತೋಟಕ್ಕೆ ಕರೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮುನ್ನೆಲೆಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕು ತಾಕೇರಿ ಸಮೀಪದ ಬಿಳಿಗೇರಿಯಲ್ಲಿ 19 ವರ್ಷ ವಯಸ್ಸಿನ ವಿವಾಹಿತ ಮಹಿಳೆ ಮೇಲೆ ತಡರಾತ್ರಿ 9.30 ಗಂಟೆಗೆ ಅತ್ಯಾಚಾರ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಮನೆ ಮುಂದೆ ನಿಂತ ವಿವಾಹಿತಳನ್ನು ಆಟೋದಲ್ಲಿ ಎಳೆದೊಯ್ದು, ಪಕ್ಕದ ಕಾಫಿ ತೋಟದಲ್ಲಿ ಅತ್ಯಾಚಾರ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂತ್ರಸ್ತೆ ಜೋರಾಗಿ ಕಿರುಚಿಕೊಂಡಿದ್ದು, ಮಹಿಳೆಯ ಧ್ವನಿ ಕೇಳಿದ ಆಕೆಯ ಅಕ್ಕ ಮತ್ತು ಸ್ಥಳೀಯರು ಕೂಡಲೇ ಘಟನೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯರು ಘಟನಾ ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ.

ಸಂತ್ರಸ್ತೆಯಿಂದ ಪೊಲೀಸ್​ ಠಾಣೆಗೆ ದೂರು: ನಿನ್ನೆ ರಾತ್ರಿ ನಾನು ಮನೆ ಮುಂದೆ ನಿಂತಿದ್ದಾಗ ನಮ್ಮ ಗ್ರಾಮದ ರಾಜು, ನೌಷದ್​ ಮತ್ತು ಫಾರೂಕ್​ ಮೂವರು ನನ್ನನ್ನು ಬಲವಂತವಾಗಿ ಎಳೆದೊಯ್ದರು, ಆಟೋದಲ್ಲಿ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ಪಕ್ಕದ ಕಾಫಿ ತೋಟಕ್ಕೆ ಕರೆದೊಯ್ದಿದ್ದರು. ತೋಟದಲ್ಲಿ ಮೂವರು ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಗ ನಾನು ಆ ಮೂವರು ಆರೋಪಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಆಗ ರಾಜು ಮತ್ತು ನೌಷದ್​ ನನ್ನನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಗ ಫಾರೂಕ್​ ಯಾವುದೋ ದ್ರವವೊಂದನ್ನು ಕುಡಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ನಾನು ಜೋರಾಗಿ ಕಿರುಚಿಕೊಂಡೆ. ಆಗ ಸ್ಥಳೀಯರು ನನ್ನ ದನಿ ಕೇಳಿ ಘಟನಾ ಸ್ಥಳಕ್ಕೆ ಓಡಿ ಬಂದರು. ಸ್ಥಳೀಯರು ಬರುತ್ತಿದ್ದಂತೆ ಮೂವರು ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ಆರೋಪಿಗಳು ಪರಾರಿಯಾಗುವ ಮುನ್ನ ನನ್ನನ್ನು ಅವಾಚ್ಯ ಪದಗಳಿಂದ ಬೈದು, ನಿಂದಿಸಿದ್ದಾರೆ. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ನಿನ್ನನ್ನು ಅತ್ಯಾಚಾರ ಮಾಡುವುದಾಗಿ ಮತ್ತು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹೋಗಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಂತ್ರಸ್ತೆ ದೂರಿನ ಮೂಲಕ ಸೋಮವಾರಪೇಟೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಈ ಘಟನೆ ಕುರಿತು ಸೋಮವಾರಪೇಟೆ ಪೊಲೀಸ್​ ಠಾಣೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರು ಆರೋಪಿಗಳ ವಿರುದ್ಧ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಿಸಿದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಾಗಿದೆ.

ಇದನ್ನೂ ಓದಿ: ಕಾರವಾರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ವಿದ್ಯಾರ್ಥಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.