ಮಡಿಕೇರಿ(ಕೊಡಗು): ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕಿಯನ್ನು ಮಡಿಕೇರಿಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಆರೋಪಿತ ಬಾಲಕನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ. ಬಾಲಕಿಯ ಪಕ್ಕದ ಮನೆಯ ಅಪ್ರಾಪ್ತ ಬಾಲಕ ಈ ಕೃತ್ಯ ಎಸಗಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.