ಕೊಡಗು/ ಮಡಿಕೇರಿ: ಜನವರಿ 21ರಂದು ಐಟಿ ವಿಚಾರಣೆಗೆ ಹಾಜರಾಗುವಂತೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದು ರಶ್ಮಿಕಾ ತಂದೆ ಮದನ್ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ನಿವಾಸಕ್ಕೆ ಐಟಿ ರೇಡ್ ಆದ ಕುರಿತು ಮಾತನಾಡಿರುವ ಅವರು, ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಸೆರೆನಿಟಿ ಹಾಲ್ನ 25 ಲಕ್ಷ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ನಾನು ಅದಕ್ಕೆ ಲೆಕ್ಕ ಕೊಟ್ಟಿದ್ದೇನೆ. ಅದು ನನ್ನ ಹಣ ಅಲ್ಲ. ಮದುವೆಯವರು ಅಡ್ವಾನ್ಸ್ ಕೊಟ್ಟಿದ್ದರು ಎಂದರು.
ಅಲ್ಲದೇ ನಾನು ಯಾವುದೇ ಅಕ್ರಮ ಹಣ ಮಾಡಿಲ್ಲ. ಐಟಿಯವರು ಅವರ ಕೆಲಸವನ್ನು ಮಾಡಿದ್ದಾರೆ. ನಾನು, ನನ್ನ ಹೆಂಡತಿ ಹಾಗೂ ಮಗಳು ರಶ್ಮಿಕಾ ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುತ್ತೇವೆ ಎಂದಿದ್ದಾರೆ.