ETV Bharat / state

ಕೊಡಗಿನ​ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ - ಕೊಡಗಿನ ಸೂಪರ್​ ಮಾರ್ಕೆಟ್

ವಿರಾಜಪೇಟೆಯ ಕಾಳಸಂತೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡುವ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನ್ಯಾಯಬೆಲೆ ಅಕ್ಕಿ ಕಾಳಸಂತೆಯಲ್ಲಿ ಮಾರಾಟ
ನ್ಯಾಯಬೆಲೆ ಅಕ್ಕಿ ಕಾಳಸಂತೆಯಲ್ಲಿ ಮಾರಾಟ
author img

By

Published : May 22, 2020, 7:58 PM IST

ವಿರಾಜಪೇಟೆ/ಕೊಡಗು: ತಾಲೂಕಿನ ಗೋಣಿಕೊಪ್ಪಲಿನ ಸೂಪರ್ ಮಾರ್ಕೆಟ್​ನಲ್ಲಿ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡುವ‌ 2 ಕ್ವಿಂಟಾಲ್ ಅಕ್ಕಿಯನ್ನು ಕೆಜಿಗೆ 18 ರೂ. ನಂತೆ ಖರೀದಿ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈ ಪ್ರಕರಣವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲಿರ ಚಲನ್ ಬಹಿರಂಗಪಡಿಸಿದ್ದಾರೆ.

ನ್ಯಾಯಬೆಲೆ ಅಕ್ಕಿ ಕಾಳಸಂತೆಯಲ್ಲಿ ಮಾರಾಟ

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪಿಡಿಓ ಶ್ರೀನಿವಾಸ್, ಗ್ರಾ.ಪಂ. ಸದಸ್ಯ ಸುರೇಶ್ ರೈ ಮುಂತಾದವರು ಅಂಗಡಿಯ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ನೆಲ್ಲಿರ ಚಲನ್​ರವರು ಆಹಾರ ನಿರೀಕ್ಷಕರಿಗೆ ದೂರು ನೀಡುವಂತೆ ಪಿಡಓಒ ಅವರಿಗೆ ಸೂಚಿಸಿದರು.

ಮಾರುತಿ ಕಾರ್​ನಲ್ಲಿ 2 ಕ್ವಿಂಟಾಲ್ ಅಕ್ಕಿ ತಂದು ಮಾರಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಶ್ರೀಮಂತರಿಗೆ ಅಂತ್ಯೋದಯ ಅಕ್ಕಿಯನ್ನು ಮಾರಾಟ ಮಾಡಿದರೆ, ಬಡ ಜನರ ಜೀವನ ಅಯೋಮಯವಾಗಲಿದೆ. ಬಡವರು ನ್ಯಾಯಬೆಲೆ ಅಂಗಡಿಯಲ್ಲಿ 20 ಕೆಜಿ ಅಕ್ಕಿ ಕೊಂಡು ಮನೆಗೆ ಬಂದು ತೂಗಿದರೆ 17 ಕೆಜಿ ಇರುತ್ತದಂತೆ. ಈ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿ ಮತ್ತು ಸೂಪರ್ ಮಾರ್ಕೆಟ್ ಮಾಲೀಕರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.