ETV Bharat / state

ವಾಟ್ಸ್‌ಆ್ಯಪ್​ ಮೂಲಕ ಅಭಿವೃದ್ಧಿ ಮಂತ್ರ: ಪ್ರವಾಹಕ್ಕೆ ನಾಶವಾದ ಸೇತುವೆ, ಮನೆಗಳ ಮರು ನಿರ್ಮಾಣ - house which was destroyed by flood

2018 ಹಾಗೂ 19 ರಲ್ಲಿ ಸುರಿದ ಧಾರಾಕಾರ ಮಳೆಗೆ 2 ನೇ ಮೊಣ್ಣಂಗೇರಿಯೂ ನಲುಗಿತ್ತು. ಈ ಹಿನ್ನೆಲೆಯಲ್ಲಿ ‌ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಸಮಾನ ಮನಸ್ಕರು ಸೇರಿ 'ನಮ್ಮ ಗ್ರಾಮ 2022' ಎಂದು ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡು ಪ್ರವಾಹದಿಂದ ಹಾನಿಗೆ ಒಳಗಾಗಿರುವ ಸ್ಥಳಗಳನ್ನು ಪುನರ್ ನಿರ್ಮಿಸುತ್ತಿದ್ದಾರೆ.

re constructed the bridge and house which was destroyed by flood
ವಾಹಕ್ಕೆ ನಾಶವಾದ ಸೇತುವೆ, ಮನೆಗಳ ಮರುನಿರ್ಮಾಣ
author img

By

Published : May 29, 2020, 3:35 PM IST

ಮಡಿಕೇರಿ(ಕೊಡಗು): ಪ್ರಾಕೃತಿಕ ಸೌಂದರ್ಯದಿಂದ ಕೂಡಿರುವ ಪುಟ್ಟ ಜಿಲ್ಲೆ ಕೊಡಗು. ಆದರೆ, ಕಳೆದ ಎರಡು ವರ್ಷಗಳಿಂದ ಮಳೆ ಇನ್ನಿಲ್ಲದ ಅವಾಂತರವನ್ನೇ ಸೃಷ್ಟಿಸಿದೆ. ಸಾಕಷ್ಟು ಆಸ್ತಿ ಹಾಗೂ ಪ್ರಾಣ ಹಾನಿಯನ್ನು ಉಂಟು ಮಾಡಿದೆ. ಹೀಗೆ 2018-19 ರವರೆಗೆ ಜಿಲ್ಲೆಯನ್ನು ಪ್ರವಾಹದ ಭೀತಿಯಲ್ಲೇ ಮುಳುಗಿಸಿರುವ ಕೊಡಗು ಚೇತರಿಸಿಕೊಳ್ಳುತ್ತಿದ್ದಂತೆ ಮಳೆಗಾಲದಲ್ಲಿ ಅತಿವೃಷ್ಟಿ ಸೃಷ್ಟಿಯಾಗುತ್ತದೆ.

ಮಹಾ ಮಳೆಗೆ ಮನೆಗಳು, ಸಂಪರ್ಕ ರಸ್ತೆಗಳು,ಹಾಗೆಯೇ ಗ್ರಾಮದ ಎಲ್ಲೆಯನ್ನೇ ಕಳೆದುಕೊಂಡ ನಿರಾಶ್ರಿತರಿಗೆ ಸರ್ಕಾರವೂ ಸಾಕಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ. ಸಂತ್ರಸ್ತರಿಗೆ ಸುರಕ್ಷಿತವಾದ ಸರ್ಕಾರಿ ಜಾಗದಲ್ಲಿ ಆಶ್ರಯ ಮನೆಗಳನ್ನು ನಿರ್ಮಿಸುತ್ತಿದೆ. ಇನ್ಫೋಸಿಸ್, ರೋಟರಿ ಮತ್ತು ರಿ ಬಿಲ್ಡ್ ಕೊಡಗು ಹೀಗೆ ಹಲವು ಖಾಸಗಿ ಸಂಸ್ಥೆಗಳು ಮಾನವೀಯ ನೆಲೆಗಟ್ಟಿನ ಮೇಲೆ ನೆರವು ನೀಡುತ್ತಿವೆ. ಆದರೆ, ಇವೆಲ್ಲವುದಕ್ಕೂ ಮೀರಿ ಹುಟ್ಟೂರು ಎನ್ನುವ ಅಭಿಮಾನದಿಂದ ಗ್ರಾಮಸ್ಥರೇ ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡು ಪ್ರವಾಹದಿಂದ ಅಸ್ತವ್ಯಸ್ತವಾಗಿರುವ ಗ್ರಾಮದ ರಸ್ತೆಗಳು, ಹಳೆ ಕಾಲದ ಸೇತುವೆಗಳ ಪುನರ್ ನವೀಕರಣಕ್ಕೆ ಕೈ ಜೋಡಿಸಿರುವ ಅಪರೂಪದ ಘಟನೆ ಮಡಿಕೇರಿ ತಾಲೂಕಿನ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ಕಂಡು ಬಂದಿದೆ.

2018 ಹಾಗೂ 19 ರಲ್ಲಿ ಸುರಿದ ಧಾರಾಕಾರ ಮಳೆಗೆ 2 ನೇ ಮೊಣ್ಣಂಗೇರಿಯೂ ನಲುಗಿತ್ತು. ಈ ಹಿನ್ನೆಲೆಯಲ್ಲಿ ‌ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಸಮಾನ ಮನಸ್ಕರು ಸೇರಿ 'ನಮ್ಮ ಗ್ರಾಮ 2022' ಎಂದು ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡು ಪ್ರವಾಹದಿಂದ ಹಾನಿಗೆ ಒಳಗಾಗಿರುವ ಸ್ಥಳಗಳನ್ನು ಪುನರ್ ನಿರ್ಮಿಸುತ್ತಿದ್ದಾರೆ.

ಪ್ರವಾಹಕ್ಕೆ ನಾಶವಾದ ಸೇತುವೆ, ಮನೆಗಳ ಮರುನಿರ್ಮಾಣ

ಗ್ರಾಮದ ವಿವೇಕ ಗಿರಿ ಬಸ್ ನಿಲ್ದಾಣದ ಬಳಿಯ ಸೇತುವೆ 2018 ರಲ್ಲಿ ಸುರಿದ ಮಳೆಯ ರಭಸಕ್ಕೆ ಕೊಚ್ಚಿ ಹೋಗಿತ್ತು. ಹಿರಿಯರು ಕಟ್ಟಿದ ಸೇತುವೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಅನಿವಾರ್ಯ ಇರುವುದರಿಂದ ಸೇತುವೆ ಸುಭದ್ರತೆ ಉಳಿಸಿಕೊಳ್ಳಬೇಕಿದೆ. ಆದ್ದರಿಂದ ತಾವೆಲ್ಲರೂ ಸರಿಯಾದ ಸಮಯಕ್ಕೆ ಶ್ರಮದಾನಕ್ಕೆ ಹಾಜರಾಗಬೇಕು ಅನ್ನುವ ಭಾವನಾತ್ಮಕ ಕರೆಗೆ ಗ್ರಾಮಸ್ಥರು ಕೈ ಜೋಡಿಸಿದ್ದಾರೆ .ಅಲ್ಲದೇ, ವಾಟ್ಸ್‌ಆ್ಯಪ್ ಅಡ್ಮಿನ್ ನೀಡುವ ಸೂಚನೆಗಳನ್ನು ತಪ್ಪದೇ ಸದಸ್ಯರು ಪಾಲಿಸುತ್ತಿದ್ದಾರೆ.

ಕೆಲಸಕ್ಕೆ ಹಾಜರಾಗುವ ಮೊದಲು ಹೆಸರನ್ನು ನೊಂದಾಯಿಸಿಕೊಂಡು ಕೆಲಸಕ್ಕೆ ಅಗತ್ಯವಿರುವ ಗುದ್ದಲಿ, ಪಿಕಾಸು, ಹಾರೆ, ಮುಟ್ಟ ತೆಗೆದುಕೊಂಡು ಹೋಗುತ್ತಾರೆ. ಗ್ರಾಮದ ಸೇತುವೆ ನಿರ್ಮಾಣಕ್ಕೆ ಟೆಂಡರ್ ಆಗಿದ್ದರೂ ಲಾಕ್‌ಡೌನ್‌ನಿಂದ ಕೆಲಸ ಸ್ಥಗಿತವಾಗಿದೆ. ಮಳೆಗಾಲ ಸಮೀಪ ಇರುವುದರಿಂದ ಸ್ಥಳೀಯರ ಅನುಕೂಲಕ್ಕೆ ತಾತ್ಕಾಲಿಕವಾಗಿ ಸೇತುವೆ ಪೂರ್ಣಗೊಳಿಸಬೇಕು ಅಂದುಕೊಂಡು ಸಮಾನ ಮನಸ್ಕರೇ ಕೈ ಜೋಡಿಸಿದ್ದಾರೆ.

ಕೊವೀಡ್-19 ಮಧ್ಯೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಜವಾವ್ದಾರಿ ವಹಿಸಿಕೊಂಡು ಪರಿಪೂರ್ಣ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಗ್ರಾಮದ ಚಂದ್ರಗಿರಿಯ ಕೃಷ್ಣರಾವ್‌ರ ಜಾಗದಲ್ಲಿ ಹಾದು ಹೋಗುವ ನದಿಗೆ ಅಡ್ಡಲಾಗಿ ತಾತ್ಕಾಲಿಕ ಸೇತುವೆ, ವಿವೇಕಗಿರಿ ಬಳಿಯ ಸೇತುವೆ, ತಡೆಗೋಡೆ ಸೇರಿದಂತೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ ಎನ್ನುತ್ತಾರೆ ಗ್ರೂಪ್ ಅಡ್ಮಿನ್ ಧನಂಜಯ್.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.