ಕೊಡಗು : ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆ ಮಡಿಕೇರಿ ತಾಲೂಕು, ವಿರಾಜಪೇಟೆ ಹಾಗೂ ಸೋಮವಾರಪೇಟೆ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ. 4 ದಿನಗಳ ಕಾಲ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.
ಮಡಿಕೇರಿ ನಗರದಲ್ಲಿ ಮಂಜಿನ ವಾತಾವರಣ ಮನೆ ಮಾಡಿದೆ. ಮಳೆ ಹಿನ್ನೆಲೆ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮುಂಗಾರು ಚುರುಕು ಹಿನ್ನೆಲೆ ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ಸ್ಥಳದಲ್ಲಿರುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಎನ್‌ಡಿಎಆರ್‌ಎಫ್ ತಂಡ ಜಿಲ್ಲೆಯಲ್ಲಿದ್ದು, ಪರಿಸ್ಥಿತಿ ಅವಲೋಕಿಸುತ್ತಿದೆ.