ಕುಶಾಲನಗರ/ಕೊಡಗು: ಕೊಡಗಿನಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ.
ಸೋಮವಾರಪೇಟೆ ತಾಲೂಕಿನ ಹಮ್ಮಿಯಾಲ, ಬಿಕ್ಕೊಡ್ಲು, ಮಾದಾಪುರ ಸೇರಿದಂತೆ ಜಿಲ್ಲೆಯಾದ್ಯಂತ ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯದ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‌ಗಳ ಮೂಲಕ 3750 ಕ್ಯೂಸೆಕ್ ನದಿಗೆ ಹಾಗೂ 1000 ಕ್ಯೂಸೆಕ್ ಪ್ರಮಾಣದ ನೀರನ್ನು ಕಾಲುವೆ ಬಿಡುಗಡೆ ಮಾಡಲಾಗಿದೆ.
ಅಲ್ಲದೆ ಹಾರಂಗಿ ಜಲಾಶಯದ ವ್ಯಾಪ್ತಿಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಹಾರಂಗಿಗೆ 3009 ಕ್ಯೂಸೆಕ್ ನೀರಿನ ಒಳ ಹರಿವು ಹೆಚ್ಚಳವಾಗಿದೆ.