ETV Bharat / state

ಕೊಡಗು ಜಿಲ್ಲಾ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ ವಿಸ್ತರಣೆ.. ನಿಯಮ ಉಲ್ಲಂಘಿಸಿದ ಹೋಂ ಸ್ಟೇಗಳ ವಿರುದ್ಧ ಕೇಸ್ - ಜುಲೈ 5ರ ವರೆಗೆ ಕೊಡಗು ಜಿಲ್ಲಾ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ

ಲಾಕ್​ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಕೇಳಿ ಬಂದ ಹಿನ್ನೆಲೆ ಜುಲೈ 5ರವರೆಗೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಪ್ರವಾಸೋದ್ಯಮ ಇಲಾಖೆ ಆದೇಶ ಹೊರಡಿಸಿದೆ. ಗಡಿಭಾಗದಲ್ಲಿ ಚೆಕ್​ ಪೋಸ್ಟ್​​ ನಿರ್ಮಿಸಲಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗಿದೆ.

kodagu-district
ಕೊಡಗು ಜಿಲ್ಲಾ ಪ್ರವಾಸೋದ್ಯಮ
author img

By

Published : Jul 1, 2021, 5:01 PM IST

ಕೊಡಗು: ಜುಲೈ 5ರ ವರೆಗೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಈಶ್ವರ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲಾ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್​ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಕೇಳಿ ಬಂದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್​​​, ಲಾಡ್ಜ್​ಗಳಲ್ಲಿ ಪ್ರವಾಸಿಗರಿಗೆ ಅವಕಾಶ ನೀಡಿದ ದೂರುಗಳು ಇದ್ದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಬಹುದಾಗಿದೆ. ಪ್ರವಾಸೋದ್ಯಮ, ಪೊಲೀಸ್, ಕಂದಾಯ ಇಲಾಖೆಗಳ ಕಾರ್ಯಪಡೆ ರಚಿಸಿದ್ದು, ಈಗಾಗಲೇ 3 ಹೋಂ ಸ್ಟೇ ಮೇಲೆ ದಾಳಿ ಮಾಡಿ ಎಫ್​ಐಆರ್ ದಾಖಲಿಸಲಾಗಿದೆ. 1 ರೆಸಾರ್ಟ್​​​ ಮೇಲೂ ದೂರು ಬಂದಿದ್ದು, ಪರಿಶೀಲಿಸಲಾಗುತ್ತದೆ ಎಂದರು.

ಇಂದು ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂ ಸ್ಟೇ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸೋದ್ಯಮ ಚಟುವಟಿಕೆಗಳಿಗೆ ಎಷ್ಟು ದಿನಗಳ ಕಾಲ ನಿರ್ಬಂಧ ಹೇರಬೇಕು, ಯಾವಾಗ ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡುತ್ತದೆ. ಅಲ್ಲಿಯವರೆಗೂ ಜಿಲ್ಲೆಗೆ ಬರುವ ಪ್ರವಾಸಿಗರ ಮೇಲೆ ಕಣ್ಣಿಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 2 ಹೋಂ-ಸ್ಟೇಗಳ ಮೇಲೆ ದಾಳಿ ನಡೆಸಿ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮವಹಿಸಲಾಗಿದೆ. ಗಡಿಭಾಗದಲ್ಲಿ ಚೆಕ್​ ಪೋಸ್ಟ್​​ ನಿರ್ಮಿಸಲಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.