ETV Bharat / state

ಮಡಿಕೇರಿ: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

author img

By ETV Bharat Karnataka Team

Published : Nov 8, 2023, 12:27 PM IST

Retired soldier goes missing in Madikeri: ಡೆತ್‌ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

retired-army-man-goes-missing-after-writing-death-note-in-madikeri
ಮಡಿಕೇರಿ : ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಮಡಿಕೇರಿ(ಕೊಡಗು): ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ಉಕ್ಕುಡ ನಿವಾಸಿ ಸಂದೇಶ್​ (38) ಕಾಣೆಯಾದವರು.

ಇದಕ್ಕೂ ಮುನ್ನ ಬರೆದಿರುವ ಪತ್ರದಲ್ಲಿ, ಮಹಿಳೆಯೊಬ್ಬಳು ನನ್ನನ್ನು ಹನಿಟ್ರ್ಯಾಪ್ ಮಾಡಿರುವುದಾಗಿ ಹೇಳಿದ್ದಾರೆ. ಈ ಕುರಿತಾಗಿ ಪೊಲೀಸ್​ ಸಿಬ್ಬಂದಿಯೊಬ್ಬರು ನನಗೆ ಮಾನಸಿಕ‌ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಹಿಳೆ ಮತ್ತು ಪೊಲೀಸ್​ ಸಿಬ್ಬಂದಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಬಳಿಕ ತಾಯಿಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂದೇಶ್​ ಅವರ ತಾಯಿ ಪ್ರತಿಕ್ರಿಯಿಸಿ, "ನನ್ನ ಮಗ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದು, ನಾಪತ್ತೆಯಾಗಿದ್ದಾನೆ. ಮಗನನ್ನು ಹುಡುಕಿಕೊಡಿ" ಎಂದು ಕಣ್ಣೀರು ಹಾಕಿದರು.

ಸಂದೇಶ್ ಅವರ ಪತ್ನಿ ಮಾತನಾಡಿ, "ಮಹಿಳೆಯೊಬ್ಬರು ನನ್ನ ಗಂಡನನ್ನು ಭೇಟಿ ಮಾಡುವಂತೆ ಒತ್ತಾಯಿಸಿದ್ದಳು. ಭೇಟಿಗೆ ಬರದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದಳು. ಈ ವಿಷಯವನ್ನು ಅವರು ಯಾರ ಬಳಿಯೂ ಹೇಳಿರಲಿಲ್ಲ. ಪೊಲೀಸರಿಗೂ ಮಾಹಿತಿ ನೀಡಿಲ್ಲ" ಎಂದು ತಿಳಿಸಿದರು.

ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್‌ಗೆ ಸೇರಿದ ವಸ್ತುಗಳು ಸಿಕ್ಕಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ಯಾಂಟ್ ಜಿಪ್‌ಲೈನ್​ನಲ್ಲಿ ಮರೆಮಾಚಿ ಚಿನ್ನ ಸಾಗಣೆ, ಸಿಕ್ಕಿಬಿದ್ದ ಪ್ರಯಾಣಿಕ- ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.