ಕೊಡಗು : ಓಮ್ನಿ ಕಾರು ಮತ್ತು ಪಿಕಪ್ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ, ಓಮ್ನಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೇತ್ರಿ ಬಳಿ ನಡೆದಿದೆ.
ಮೂರ್ನಾಡು ಗ್ರಾಮದ ನಿವಾಸಿಗಳಾದ ಹರೀಶ್ (45) ಮತ್ತು ಸುಬ್ರಹ್ಮಣಿ (42) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ. ವಾಹನ ಹಿಂದಿಕ್ಕುವ ರಭಸದಲ್ಲಿ ಓಮ್ನಿ ಕಾರು ರಸ್ತೆ ಬದಿಗೆ ಡಿಕ್ಕಿ ಹೊಡೆದು, ಬಳಿಕ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರು ನಜ್ಜುಗುಜ್ಜಾಗಿದ್ದು, ಪಿಕಪ್ ವಾಹನ ಉರುಳಿ ಬಿದ್ದಿದೆ. ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.