ಕೊಡಗು : ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಸಂತ ಮೈಕೆಲರ ಪ್ರೌಢಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಪರೀಕ್ಷಾ ಭಯ ಹಾಗೂ ಭಾಷೆಯ ಗೊಂದಲಗಳನ್ನು ದೂರ ಮಾಡುತ್ತಿದ್ದಾರೆ.
ನಗರದ ಸಂತ ಮೈಕೆಲರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೊರೊನಾ ಹೆಚ್ಚುತ್ತಿರುವ ಸದ್ಯದ ಸ್ಥಿತಿಯಲ್ಲಿ ಶಿಕ್ಷಣ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸುವುದು, ಪರೀಕ್ಷಾ ಕೇಂದಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಲ್ಲಿ ಭಾಷೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳಿಗೆ ಪರಿಹಾರ ನೀಡುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ಗೊಂದಲಗಳು ಆಗದಂತೆ ಪರೀಕ್ಷಾ ಗುರುತಿನ ಚೀಟಿಯಲ್ಲಿ ಕೊಠಡಿಗಳ ಸಂಖ್ಯೆಯನ್ನು ಬರೆಯಲಾಗಿದೆ. ಅಂತರ ಕಾಯ್ದುಕೊಳ್ಳಲು ಬಾಕ್ಸ್ ಮಾರ್ಕ್‌ಗಳನ್ನು ಬರೆದು ಥರ್ಮಲ್ ಸ್ರ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.