ETV Bharat / state

ಕೊಡಗಿನಲ್ಲಿ ಕೊರೊನಾದಿಂದ ಮುಕ್ತಿ ಪಡೆದಿದ್ದವನಿಗೆ ಮತ್ತೆ ಜ್ವರ: ಜಿಲ್ಲಾಸ್ಪತ್ರೆಗೆ ದಾಖಲು!

ದುಬೈನಿಂದ ಬಂದಿದ್ದ ಮಡಿಕೇರಿ ತಾಲೂಕಿನ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟಿವ್ ಕೇಸ್​ ಪತ್ತೆಯಾಗಿ ಹಲವು ದಿನಗಳ ಕಾಲ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಿದ ನಂತರ ಆಸ್ಪತ್ರೆಯಿಂದ ಏಪ್ರಿಲ್ 11ರಂದು ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿಗಾಗರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

author img

By

Published : Apr 15, 2020, 4:54 PM IST

ಕೊಡಗು: ಕೊರೊನಾ ವೈರಸ್‌ನಿಂದ ಗುಣಮುಖನಾಗಿದ್ದ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಮತ್ತೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸುದ್ದಿಗಾಗರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ದುಬೈನಿಂದ ಬಂದಿದ್ದ ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದ ವ್ಯಕ್ತಿಯಲ್ಲಿ ಮಾರ್ಚ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.‌ ಹಲವು ದಿನಗಳ ಕಾಲ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಿದ ನಂತರ ಗುಣಮುಖನಾಗಿ ಆಸ್ಪತ್ರೆಯಿಂದ ಏಪ್ರಿಲ್ 11ರಂದು ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಪುನಃ ‌ಆತನ ಗಂಟಲು ದ್ರವವನ್ನು ಲ್ಯಾಬ್‌ಗೆ ರವಾನಿಸಲಾಗಿದೆ. ನಾಳೆ ವರದಿ ಬರುವ ನಿರೀಕ್ಷೆ ಇದೆ.

ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದ ಅವರು ಹೋಂ ಕ್ವಾರಂಟೈನ್‌ನಲ್ಲೇ ಇರುವುದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.