ತಲಕಾವೇರಿ (ಕೊಡಗು): ಜಿಲ್ಲೆಯ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದವರ ಹುಡುಕಾಟದಲ್ಲಿ ತೊಡಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ, ಸಂಜೆಯಾದ ಕಾರಣ ರಕ್ಷಣಾ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ.
ಮೂರು ದಿನಗಳ ಬಳಿಕ ಕಾರ್ಯಾಚರಣೆ ಆರಂಭಿಸಿದ್ದ ಎನ್‌ಡಿಆರ್‌ಎಫ್ ತಂಡ, ಇಂದು ಮಧ್ಯಾಹ್ನ ಕಣ್ಮರೆಯಾದವರಿಗೆ ತೀವ್ರ ಶೋಧ ನಡೆಸಿದ್ದರು. ಮೊದಲ ದಿನದ ಕಾರ್ಯಾಚರಣೆಯಲ್ಲಿ ಕಾಣೆಯಾಗಿದ್ದ ಐವರಲ್ಲಿ ಆನಂದ ತೀರ್ಥ ಸ್ವಾಮೀಜಿ ಮೃತ ದೇಹ ಪತ್ತೆಯಾಗಿತ್ತು.
ಆನಂದ ತೀರ್ಥ ಸ್ವಾಮೀಜಿ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಡಿಕೇರಿ ತಾಲೂಕಿನ ತಾವೂರಿನ ಸಮೀಪ ಚೆದುಕಾರ್ ಸೇತುವೆ ಬಳಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೃತ ದೇಹವನ್ನು ವೀಕ್ಷಿಸಿದರು.
ಜಿಲ್ಲೆಯಲ್ಲಿ ಮಳೆ ಕಡಿಮೆ ಆಗಿರುವುದರಿಂದ ನಾಳೆ ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಲಿದ್ದಾರೆ.