ಕೊಡಗು: ಕೊಡಗಿನ ಯೋಧನೊಬ್ಬ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಪೂನಾದ ವಸತಿ ಗೃಹದಲ್ಲಿ ನಡೆದಿದೆ.
ಕೊಡಗಿನ ವೀರಾಜಪೇಟೆ ತಾಲೂಕಿನ ಮುಗುಟಗೇರಿ ನಿವಾಸಿ ರತನ್ ಬೋಪಣ್ಣ (22) ಮೃತ ಯೋಧ. ಈತ ಪೂನಾದ ಜಬಲ್ ಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದು, 4 ದಿನಗಳ ಹಿಂದೆ ಮೃತಪಟ್ಟಿರುವ ಸಂಶಯ ವ್ಯಕ್ತವಾಗಿದೆ.
ಸೇನಾಧಿಕಾರಿಗಳು ಘಟನಾ ಸ್ಥಳಕ್ಕೆ ಮೃತ ಯೋಧನ ಪೋಷಕರನ್ನು ಕರೆಸಿಕೊಳ್ಳುತ್ತಿದ್ದಾರೆ. ಕಳೆದ ನವೆಂವರ್ ತಿಂಗಳಲ್ಲಿ ಮನೆಗೆ ಬಂದು ಹೋಗಿದ್ದ ಯೋಧ 2019 ರ ಏಪ್ರಿಲ್ ತಿಂಗಳಲ್ಲಿ ಸೇನೆಗೆ ಸೇರ್ಪಡೆಯಾಗಿದ್ದರು.