ETV Bharat / state

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಮಾಡುವುದಿಲ್ಲ.. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ - District Collector Anees Kamani Joy

ಹೀಗಾಗಿ ಲಾಕ್​​ಡೌನ್ ಮಾಡುವುದಿಲ್ಲ, ಬದಲಾಗಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯ, ದೇಶಗಳಿಂದ ಕೊಡಗಿಗೆ ಬರುವವರಿಂದ ಕೊರೊನಾ ವೈರಸ್ ಹರಡುತ್ತಿದೆ. ಆದ್ದರಿಂದ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ..

District Collector Anees Kamani Joy
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
author img

By

Published : Jul 14, 2020, 6:28 PM IST

ಕೊಡಗು : ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಮಾಡುವುದಿಲ್ಲ. ಬದಲಾಗಿ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟಿದ ಕೊರೊನಾ ಏಳು ದಿನ ಎನ್ನುವಷ್ಟರಲ್ಲೇ 200ರ ಗಡಿ ದಾಟಿದೆ. ಹೀಗಾಗಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು ಲಾಕ್‍ಡೌನ್ ಮಾಡಿದ್ರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ಆದರೆ, ಜಿಲ್ಲಾಧಿಕಾರಿ ಮಾತ್ರ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವುದಿಲ್ಲ. ಅಷ್ಟಕ್ಕೂ ಲಾಕ್‍ಡೌನ್ ಮಾಡಿದ್ರೆ ಕೊರೊನಾ ನಿಯಂತ್ರಣಕ್ಕೆ ಬರುವುದಿಲ್ಲ. ಲಾಕ್‍ಡೌನ್ ಮಾಡಿ ಮತ್ತೆ ಓಪನ್ ಮಾಡಿದಾಗ ಸಹಜವಾಗಿಯೇ ವೈರಸ್ ಹರಡಿಯೇ ಹರಡುತ್ತದೆ. ಜೊತೆಗೆ ಮುಖ್ಯವಾಗಿ ಲಾಕ್​​ಡೌನ್ ಮಾಡಿದ್ರೆ ಬಡವರು, ಮಧ್ಯಮ ವರ್ಗದ ಜನರು ತೀವ್ರ ಸಮಸ್ಯೆ ಅನುಭವಿಸಲಿದ್ದಾರೆ ಎಂದರು.

ಹೀಗಾಗಿ ಲಾಕ್​​ಡೌನ್ ಮಾಡುವುದಿಲ್ಲ, ಬದಲಾಗಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯ, ದೇಶಗಳಿಂದ ಕೊಡಗಿಗೆ ಬರುವವರಿಂದ ಕೊರೊನಾ ವೈರಸ್ ಹರಡುತ್ತಿದೆ. ಆದ್ದರಿಂದ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಬರುತ್ತಿರುವವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಇವರಿಗೆ ಕೈಗೆ ಸೀಲು ಹಾಕಲಾಗುತ್ತಿದ್ದು, ಅಂತಹವರು ಯಾವುದೇ ಕಾರಣಕ್ಕೂ ಹೊರ ಬರಬಾರದು ಎಂದರು.

ಇನ್ನು, ಕೋವಿಡ್ ಲಕ್ಷಣಗಳಿರುವವರು ಹೊರಗೆ ಓಡಾಡುವ ಬದಲು ತಪ್ಪದೇ ಆಸ್ಪತ್ರೆಗೆ ಹೋಗಿ ಪರಿಶೀಲಿಸಿಕೊಳ್ಳಬೇಕು. ಜನರು ಕೂಡ ಗುಂಪುಗೂಡುವುದನ್ನು ನಿಯಂತ್ರಿಸಬೇಕು ಎಂದಿದ್ದಾರೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್​​ಡೌನ್ ಮಾಡಲಾಗುವುದು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.