ETV Bharat / state

ಕೊಡಗು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ - ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಮುಂಜಾನೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿಮಾಡಿದೆ, ಈ ವೇಳೆ ವ್ಯಕ್ತಿ ‌ಕೂಗಾಡಿದ್ದು, ಸ್ಥಳೀಯರು ಬಂದು ಆನೆಯನ್ನು ಓಡಿಸಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ರಂಗಸ್ವಾಮಿ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾನೆ.

The person died by elephant attack in kodagu
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
author img

By

Published : Jun 7, 2021, 1:14 PM IST

ಕೊಡಗು : ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಇಂದು ಕೂಡ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾನೆ.

ಪೊನ್ನಪೇಟೆ ತಾಲೂಕಿನ ಅರುವತೋಕ್ಲು ಗ್ರಾಮದ ಪಿಎಚ್​ಎಸ್ ಕಾಲೋನಿಯ ನಿವಾಸಿ ರಂಗಸ್ವಾಮಿ (51) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಈತ ವಿದ್ಯುತ್ ಗುತ್ತಿಗೆದಾರನಾಗಿ ಕಾರ್ಯನಿರ್ವಹಿಸುತ್ತಿದ್ದ. ಆನೆ ದಾಳಿಯಿಂದ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರು ಬಿಟ್ಟಿದ್ದಾರೆ.

ಮುಂಜಾನೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿಮಾಡಿದೆ. ಈ ವೇಳೆ ವ್ಯಕ್ತಿ ‌ಕೂಗಾಡಿದ್ದು, ಸ್ಥಳೀಯರು ಬಂದು ಆನೆಯನ್ನು ಓಡಿಸಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ ರಂಗಸ್ವಾಮಿ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಆರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ಭಾಗದಲ್ಲಿ 12 ಕ್ಕೂ ಹೆಚ್ಚು ಆನೆಗಳು ರಸ್ತೆಯಲ್ಲಿ ಓಡಾಡುತ್ತಿವೆ, ಕೂಡಲೇ ಆನೆಗಳನ್ನು ಕಾಡಿಗೆ ಓಡಿಸಬೇಕು ಎನ್ನುತ್ತಾರೆ ಸ್ಥಳೀಯರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.