ಕೊಡಗು : ಜಿಲ್ಲೆಯ ಗಡಿ ಭಾಗದಲ್ಲಿ ಹುಲಿ ದಾಳಿ ಮುಂದುವರೆದಿದೆ. ಮೇಯುತ್ತಿದ್ದ ಹಸುವೊಂದರ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದರೆಯ ಆಸ್ತಾನ ಹಾಡಿಯಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ.
ಸಿದ್ದಾಪುರ ಮಾಲ್ದಾರೆ ಆಸ್ತಾನ ಹಾಡಿಯ ನಿವಾಸಿ ಮಾಲಾ ಎಂಬುವವರು ಹಸುವನ್ನು ಮೇಯಿಸುತ್ತಿದ್ದಾಗ ಅವರ ಎದುರಿಗೆ ಹಸುವಿನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದ್ದು, ಹಸು ಮೃತಪಟ್ಟಿದೆ ಎನ್ನಲಾಗಿದೆ. ಅಲ್ಲದೇ ಗಡಿ ಭಾಗದಲ್ಲಿ ನಿರಂತರವಾಗಿ ಹುಲಿ ದಾಳಿ ಹೆಚ್ಚಾಗುತ್ತಿದ್ದು, ಕೂಡಲೇ ಹುಲಿಯನ್ನು ಸೆರೆ ಹಿಡಿದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.