ETV Bharat / state

ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ: ಆತಂಕದಲ್ಲಿ ಸ್ಥಳೀಯರು - ಕೊಡಗು ಹುಲಿ ದಾಳಿ ಸುದ್ದಿ

ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.

ಹುಲಿ ದಾಳಿಗೆ ಬಲಿಯಾದ ಹಸು
author img

By

Published : Nov 23, 2019, 10:50 AM IST

ಕೊಡಗು: ಕೊಡಗಿನಲ್ಲಿ ಹುಲಿ ದಾಳಿ ಮುಂದುವರೆದಿದ್ದು, ನಿನ್ನೆ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.

ದೇವನೂರಿನ ಪೋಡಮಡ ಸ್ವಾತಿ ಕುಟ್ಟಯ್ಯ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ. ತಡರಾತ್ರಿ ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕಾಲ್ಕಿತ್ತಿದೆ. ವಿರಾಜಪೇಟೆ ತಾಲೂಕಿನ ಸುತ್ತಮುತ್ತ ಹುಲಿ ದಾಳಿ ವಿಪರೀತವಾಗಿದ್ದು, 4 ದಿನಗಳ ಹಿಂದಷ್ಟೆ 2 ಹಸುಗಳ ಮೇಲೆ ದಾಳಿ ನಡೆದಿತ್ತು. ಇದರಿಂದ ಈ ವ್ಯಾಪ್ತಿಯ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಹುಲಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಾಳೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕೊಡಗಿನಲ್ಲಿ ಮುಂದುವರೆದ ಹುಲಿದಾಳಿ: ಆತಂಕದಲ್ಲಿ ಸ್ಥಳೀಯರು..!

ಕೊಡಗು: ಕೊಡಗಿನಲ್ಲಿ ಹುಲಿದಾಳಿ ವಿಪರೀತವಾಗಿದ್ದು
ನೆನ್ನೆ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.
ದೇವನೂರಿನ ಪೋಡಮಡ ಸ್ವಾತಿ ಕುಟ್ಟಯ್ಯ ಎಂಬುಬವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ತಡರಾತ್ರಿ ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆರಗಿ ಕೊಂದು ತಿಂದು ಕಾಲ್ಕಿತ್ತಿದೆ.ವಿರಾಜಪೇಟೆ ತಾಲೂಕಿನ ಸುತ್ತಮುತ್ತ ಹುಲಿದಾಳಿ ವಿಪರೀತವಾಗಿದ್ದು ನಾಲ್ಕು ದಿನಗಳ ಹಿಂದಷ್ಟೆ ವ್ಯಾಪ್ತಿಯಲ್ಲಿ ಎರಡು ಹಸುಗಳ ಮೇಲೆ ದಾಳಿ ನಡೆದಿತ್ತು. ಇದರಿಂದ ವ್ಯಾಪ್ತಿಯ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು ಕೂಡಲೇ ಹುಲಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಾಳೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.