ಕೊಡಗು : ಹುಲಿಯೊಂದು ಹಸುವನ್ನು ಕೊಂದು ತಿಂದಿರುವ ಘಟನೆ ಮಡಿಕೇರಿ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಹುದಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಗೂರು ಗ್ರಾಮದ ನಿವಾಸಿ ಕಾಯಪಂಡ ಮಾಚ್ಚಯ ಎಂಬುವರ ಹಸುವನ್ನು ಹುಲಿ ಕೊಂದು ಹಾಕಿದೆ.
ಈ ಘಟನೆಯಿಂದಾಗಿ ಸ್ಥಳೀಯರು ಸಾಕಷ್ಟು ಆತಂಕಕ್ಕೊಳಗಾಗಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.