ಕೊಡಗು: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ನಿಷೇಧಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ನವೆಂಬರ್ 10ರಂದು ಆಚರಿಸುತ್ತಿದ್ದ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಬಾರಿ ಒಂದೇ ದಿನ ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಒಟ್ಟಿಗೆ ಬಂದಿರುವುದರಿಂದ ಜಯಂತಿ ನಿಷೇಧ ಹಿನ್ನೆಲೆ ಬಿಗಿ ಭದ್ರತೆ ಒದಗಿಸಿ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದೆ.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಪ್ರಾರಂಭದಲ್ಲಿ ಕೊಡಗಿನಲ್ಲಿ ಆಚರಣೆಗೆ ಪರ-ವಿರೋಧ ಚರ್ಚೆಗಳು ಶುರುವಾಗಿ ರಕ್ತಪಾತಕ್ಕೆ ಕಾರಣವಾಗಿತ್ತು. ಅಲ್ಲದೆ ಜಿಲ್ಲೆಯಲ್ಲಿ ಶಾಂತಿಯನ್ನು ಕದಡಿತ್ತು. ಜಿಲ್ಲೆಯಾದ್ಯಂತ ಸರ್ಕಾರಿ, ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಎಂದು ಕೊಡಗು ಎಸ್ಪಿ ಸುಮನಾ ಡಿ. ಪನ್ನೇಕರ್ ಸ್ಪಷ್ಟಪಡಿಸಿದ್ದಾರೆ.