ETV Bharat / state

ತಲಕಾವೇರಿ: ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ

ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವಕ್ಕೆ ಭರ್ಜರಿ ಸಿದ್ಧತೆಗಳು ನಡೆದಿವೆ.

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ
ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ
author img

By ETV Bharat Karnataka Team

Published : Oct 17, 2023, 10:19 PM IST

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಮಡಿಕೇರಿ (ಕೊಡಗು): ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯಕಾಲ ನೆರವೇರಲಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ಧಾರೆ. ಒಂದು ತಿಂಗಳು ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ತಲಕಾವೇರಿ, ತ್ರಿವೇಣಿ ಸಂಗಮ, ಭಾಗಮಂಡಲದಲ್ಲಿ ಸಕಲರೀತಿಯಲ್ಲಿ ಸಿದ್ದತೆಗಳು ನಡೆದಿವೆ.

ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ವಾರದಿಂದಲೇ ನಾನಾ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಅರ್ಚಕರ ತಂಡವೂ ಕಾವೇರಿಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಈ ಬಾರಿ ಜಲಪ್ರಳಯದಿಂದ ತತ್ತರಿಸಿರುವ ಜನತೆಗೆ ಕಾವೇರಿ ತೀರ್ಥರೂಪಿಣಿಯಾಗಿ ಬಂದು ಒಳ್ಳೆದು ಮಾಡಲಿದ್ದಾಳೆ ಎಂಬ ನಂಬಿಕೆ ಭಕ್ತಗಣದ್ದು.

ಬ್ರಹ್ಮಗಿರಿಯ ಮಡಿಲಿನಲ್ಲಿ ಹುಟ್ಟುವ ಕಾವೇರಿ ರಾಜ್ಯದಲ್ಲಿ ಹರಿದು ರೈತರ ಹೊಲಗದ್ದೆಗಳನ್ನು ಹಸಿರಾಗಿಸಿ, ಅನ್ನದಾತೆಯಾಗಿ ಹರಿಯುತ್ತಾಳೆ. ಹಾಗಾಗಿ ಕಾವೇರಿ ನೀರನ್ನು ಬಳಸುವ ಮಂಡ್ಯ, ಮೈಸೂರು, ಬೆಂಗಳೂರು, ಹಾಸನ ಜಿಲ್ಲೆಗಳಿಂದ ಸೇರಿದಂತೆ ದೇಶದ ಹಲವೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಾರೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಮಾಡಿ ಅಲ್ಲಿ ಭಗಂಢೇಶ್ವರನಿಗೆ ಪೂಜೆ ಸಲ್ಲಿಸಿ, ನಂತರ ಕಾವೇರಿ ಮಾತೆಯ ದರ್ಶನ ಪಡೆಯುತ್ತಾರೆ. ತೀರ್ಥೋದ್ಭವವಾಗುತ್ತಿದ್ದಂತೆ ತೀರ್ಥ ಸಂಗ್ರಹಿಸಲು ಮುಗಿಬೀಳುವ ಜನರು ತೀರ್ಥ ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ 12 ಕಿಲೋಮೀಟರ್ ದೂರದಿಂದಲೇ ಲೈಟಿಂಗ್ ವ್ಯವಸ್ಥೆಗಾಗಿ 1500ಕ್ಕೂ ಹೆಚ್ಚು ಟ್ಯೂಬ್​ಲೈಟ್​ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 2 ಡಿವೈಎಸ್‍ಪಿ, 9 ಪೊಲೀಸ್ ಇನ್ಸ್​ಪೆಕ್ಟರ್, 15 ಸಬ್ ಇನ್ಸ್​ಪೆಕ್ಟರ್​ಗಳು, 30 ಮಂದಿ ಸಹಾಯಕ ಸಬ್ ಇನ್ಸ್​ಪೆಕ್ಟರ್​ಗಳು, 350 ಹೆಡ್‍ ಕಾನ್ಸ್​ಟೇಬಲ್, ಅಗತ್ಯ ಪೊಲೀಸರು, ಜೊತೆಗೆ ಗೃಹ ರಕ್ಷಕದಳದವರು ಕರ್ತವ್ಯ ನಿರ್ವಹಿಸಲಿದ್ದು, ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ನಾಳೆ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ಭರದ ಸಿದ್ಧತೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.