ಮಡಿಕೇರಿ(ಕೊಡಗು): ಮಂಜಿನ ನಗರಿ ಸೇರಿದಂತೆ ಪ್ರಕೃತಿ ಸೌಂದರ್ಯದ ಮೂಲಕ ವರ್ಷಪೂರ್ತಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದರಲ್ಲೂ ರಜಾ ದಿನ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಇಲ್ಲಿ ಟೂರಿಸ್ಟ್ಗಳು ತುಂಬಿ ತುಳುಕುತ್ತಾರೆ. ಪ್ರವಾಸಿರ ಸ್ವರ್ಗ ಎಂದು ಕರೆಸಿಕೊಳ್ಳುವ ಕೂಡಗಿಗೆ ಹೊಸ ವರ್ಷಾಚರಣೆ ವೇಳೆಯಲ್ಲಂತೂ ಪ್ರವಾಸಿಗರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ.
ರೆಸಾರ್ಟ್ ಹೊಂಸ್ಟೇ ಉದ್ಯಮಿಗಳಿಗೆ ಹಬ್ಬ.. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯಲ್ಲಿರುವ ರೆಸಾರ್ಟ್ಗಳು ಮತ್ತು ಹೋಸ್ಟೇಗಳು ಈಗಾಗಲೇ ವಾರ ತಿಂಗಳು ಮುಂಚೆಯೇ ಬುಕ್ ಆಗಿರುವ ನಿಟ್ಟಿನಲ್ಲಿ ಅವು ಬಹುತೇಕ ಭರ್ತಿಯಾಗಿವೆ.
ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧ.. ಕೊಡಗು ಜಿಲ್ಲೆಯದ್ಯಾಂತ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಹೊಸ ವರ್ಷಾಚರಣೆಯ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲದಿದ್ರು ಡಿಜೆ ಹಾಗೂ ಸೌಂಡ್ ಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಕೋವಿಡ್ ಅವಧಿಯಲ್ಲಿ ನಲುಗಿದ್ದ ಕೊಡಗು ಉದ್ಯಮಿಗಳು.. ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಜಲಪ್ರಳಯ ಹಾಗೂ ಕೋವಿಡ್ನಿಂದಾಗಿ ನೆಲಕಚ್ಚಿತ್ತು, ಹೋಂ ಸ್ಟೇ ಹಾಗೂ ರೆಸಾರ್ಟ್ ನಡೆಸುತ್ತಿದ್ದ ಮಾಲೀಕರು ನಷ್ಟ ಅನುಭವಿಸಿದ್ದರು. ಸತತ ನಾಲ್ಕುವರ್ಷಗಳ ನಂತರ ಇದೀಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆ ಕಂಡಿದೆ. ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೋಂ ಸ್ಟೇ ಹಾಗೂ ರೆಸಾರ್ಟ್ಗಳು ಬಹುತೇಕ ಭರ್ತಿಯಾಗಿದ್ದು ಪ್ರವಾಸೋದ್ಯಮವನ್ನೇ ಅವಲಂಬಿಸಿದ್ದ ಕುಟುಂಬಗಳಲ್ಲಿ ಸಂತಸ ಮನೆ ಮಾಡಿದೆ.
ಹೆಚ್ಚಿದ ಪ್ರವಾಸಿಗರು, ಟ್ರಾಫಿಕ್ ಜಾಮ್ ಕಿರಿ ಕಿರಿ.. ವೀಕೆಂಡ್ ಹಾಗೂ ಇಯರ್ ಎಂಡ್ಗಳೆರಡು ಶನಿವಾರ, ಭಾನುವಾರ ಬಂದಿರುವುದು ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿಂದಲೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗಿನತ್ತ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ಹೋಗಿವೆ. ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.
ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ.. ಕೋವಿಡ್ ಮಾರ್ಗಸೂಚಿ ಪಾಲನೆ ಜೊತೆಗೆ ಈ ಬಾರಿ ಆತಿಥ್ಯ ನೀಡಲು ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ಸಜ್ಜಾಗಿವೆ. ಡಿಜೆ & ಇತರೆ ಮ್ಯೂಸಿಕ್ ಸೌಂಡ್ಸ್ ಗಳಿಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ನಿಯಮ ಉಲ್ಲಂಘಿಸಿದ್ರೆ ಕ್ರಮ.. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳೋದಾಗಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೀಟ್ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಹೊಸ ವರ್ಷಾಚರಣೆ ಹಿನ್ನೆಲೆ ಮಂಗಳೂರಿನಲ್ಲಿ ಕಟ್ಟು ನಿಟ್ಟಿನ ನಿಯಮ ಜಾರಿ